ಈ ಬಾರಿ ಹುಟ್ಟುಹಬ್ಬ ಆಚರಿಸಲ್ಲ: ಮಾಜಿ ಪ್ರಧಾನಿ H.D. ದೇವೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮೇ 18ರಂದು 91 ವರ್ಷ ಪೂರೈಸಿ 92ನೇ ವಸಂತಕ್ಕೆ ಕಾಲಿಡಲಿದ್ದು, ಆದರೆ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ.

ಈ ಕುರಿತಂತೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಅಭಿಮಾನಿಗಳು ಹಾಗೂ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರಲ್ಲಿ ನನ್ನ ವಿನಂತಿ.ಇದೇ ತಿಂಗಳ 18 ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕೋರಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!