ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದ ಪ್ರಜ್ವರ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪಿ ಸತೀಶ್ ಬಾಬುಗೆ ಮೇ.24ರವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಲಾಗಿತ್ತು.ಆದ್ರೇ ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಸತೀಶ್ ಬಾಬುಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮೇ.24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.