ರಾಮ ಮಂದಿರದಂತೆ ಸೀತೆಗಾಗಿ ಮಂದಿರ ನಿರ್ಮಾಣ: ಅಮಿತ್‌ ಶಾ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಗಿದ್ದು, ಅದೇ ರೀತಿ ಬಿಹಾರದ ಸೀತಾಮಡಿಯಲ್ಲಿ ಬಿಜೆಪಿಯು ಸೀತೆಗಾಗಿ ಮಂದಿರ (Sita Temple) ನಿರ್ಮಿಸಲಾಗುವುದು ಎಂದು ಕೇಂದ್ರ ಸಚಿವ ಅಮಿತ್‌ ಶಾ ಘೋಷಣೆ ಮಾಡಿದ್ದಾರೆ.

ಬಿಹಾರದ ಸೀತಾಮಡಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಶಾ , ವೋಟ್‌ ಬ್ಯಾಂಕ್‌ ರಾಜಕೀಯಕ್ಕೆ ಬಿಜೆಪಿಯು ಹೆದರುವುದಿಲ್ಲ. ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮಲಲಾನಿಗಾಗಿ ರಾಮಮಂದಿರ ನಿರ್ಮಾಣ ಮಾಡಿದ್ದಾರೆ. ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸಲಾಗಿದೆ. ಇನ್ನು, ಸೀತೆಯ ಜನ್ಮಸ್ಥಳದಲ್ಲಿ ಸೀತೆಗಾಗಿ ಮಂದಿರ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ರಾಮಮಂದಿರ ನಿರ್ಮಾಣ ಮಾಡಲು ಅಧಿಕಾರದಲ್ಲಿದ್ದವರು ದೂರದಲ್ಲೇ ಉಳಿದರು. ಆದರೆ, ಮೋದಿ ಅವರ ಕಾಲದಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಯಿತು. ಈಗ ಸೀತೆಗಾಗಿ ಯಾರಾದರೂ ರಾಮಮಂದಿರ ನಿರ್ಮಾಣ ಮಾಡಿದರೆ, ಅದು ನರೇಂದ್ರ ಮೋದಿ ಅವರು ಮಾತ್ರ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಹಾಗೂ ಆರ್‌ಜೆಡಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಲಾಲು ಪ್ರಸಾದ್ ಯಾದವ್‌ ಅವರು ಪವರ್‌ ಪಾಲಿಟಿಕ್ಸ್‌ನಿಂದಾಗಿ ಕಾಂಗ್ರೆಸ್‌ ಜತೆ ಸೇರಿದರು. ಲಾಲು ಪ್ರಸಾದ್‌ ಯಾದವ್‌ ಅವರು ತಮ್ಮ ಪುತ್ರನನ್ನು ಸಿಎಂ ಮಾಡಬೇಕು ಎಂಬ ಏಕಮಾತ್ರ ಉದ್ದೇಶದಿಂದ ಅವರು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡರು ಎಂದು ಟೀಕಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!