ಹೊಸದಿಗಂತ ವರದಿ,ಮೈಸೂರು:
ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು ೩೦ ಸಾವಿರ ಲಂಚ ಸ್ವೀಕರಿಸುತ್ತಿದ್ದ ಜಿಲ್ಲೆಯ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ನಟೇಶ್ ಎಂಬುವರಿಗೆ ಆಹಾರ ಪೂರೈಕೆ ಮಾಡಿದ ಬಿಲ್ ಪಾವತಿಸಲು ೩೦ ಸಾವಿರ ಲಂಚಕ್ಕೆ ವಿಜಯ್ ಕುಮಾರ್ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಈ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ನಟೇಶ್‌ರಿಂದ ವಿಜಯ್ ಕುಮಾರ್ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ, ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಕೃಷ್ಣಯ್ಯ, ಇನ್ಸೆ÷್ಪಕ್ಟರ್ ಗಳಾದ ರವಿಕುಮಾರ್, ರೂಪಶ್ರೀ, ಲೋಕೇಶ್ ಹಾಗೂ ಸಿಬ್ಬಂದಿಗಳಾದ ಮೋಹನ್ ಗೌಡ, ವೀರಭದ್ರ ಸ್ವಾಮಿ, ಆಶಾ, ತ್ರಿವೇಣಿ, ಪುಷ್ಪ ಲತಾ, ದಿನೇಶ್, ಲೋಕೇಶ್, ಪೃಥ್ವಿಷ, ಮೋಹನ್ ಗೌಡ, ಶೇಖರ್, ಲೋಕೇಶ್ ಭಾಗವಹಿಸಿದ್ದರು.
When these loafers learn lesson, now go to jail