ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಶ್ರಮಿಸುತ್ತಿರುವ ಮಣ್ಣಿನ ಮಗ ಎಂದು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಟಿ ಕಂಗನಾ ರಣಾವತ್ ಹೇಳಿದ್ದಾರೆ.
ಕುಲು ಜಿಲ್ಲೆಯ ಜಗತ್ ಖಾನಾದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೋದಿಯವರು ಉತ್ತಮ ಆಡಳಿತದ ಪ್ರತೀಕ. ಪ್ರಧಾನಿಗೆ ಪಹಾರಿ ಸೇರಿದಂತೆ ಹಲವಾರು ಭಾಷೆಗಳು ತಿಳಿದಿವೆ. ಸೋನಿಯಾ ಗಾಂಧಿಯಂತೆ ಇಟಲಿಯವರಲ್ಲ. ಅವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಒಂದೆಡೆ ಮೋದಿಯವರ ಉತ್ತಮ ಆಡಳಿತವಿದ್ದರೆ ಮತ್ತೊಂದೆಡೆ ಕಾಂಗ್ರೆಸ್‌ನ ಭ್ರಷ್ಟಾಚಾರವಿದೆ. ಹೀಗಾಗಿ ಹಿಮಾಚಲ ಪ್ರದೇಶದ ಜನರು ಜೂನ್ 1 ರ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಮನಸ್ಸು ಮಾಡಿದ್ದಾರೆ ಎಂದು ತಿಳಿಸಿದರು.