BIG NEWS | ಡಿಕೆ ಶಿವಕುಮಾರ್‌ರಿಂದ 100 ಕೋಟಿ ರೂ. ಆಫರ್: ಹೊಸ ಬಾಂಬ್ ಸಿಡಿಸಿದ ದೇವರಾಜೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಮಾತನಾಡಿದ್ದಲ್ಲ ಎಂದು ಹೇಳಿದರು.

ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ನಾನು ಹೇಳಿದ್ದೆನಲ್ಲವೇ? ಅವರ ಬಗ್ಗೆ ಹೇಳುತ್ತೇನೆ. ಎನ್‌. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

ಇಷ್ಟೆಲ್ಲ ದೊಡ್ಡ ಹಗರಣವಾಗಿರುವುದರಿಂದ ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರಲು ಹೋಗಿದ್ದರು. ನಮಗೆ ಸುಮಾರು 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು. ಅದರಲ್ಲಿ 5 ಕೋಟಿ ರೂಪಾಯಿ ಅಡ್ವಾನ್ಸ್ ಅನ್ನು ಬೋರಿಂಗ್ ಕ್ಲಬ್‌ನ ರೂಂ ನಂಬರ್ 110ಕ್ಕೆ ಕಳಿಸಿದ್ದರು. ಆ ಮೀಟಿಂಗ್‌ಗೆ ಚನ್ನರಾಯಪಟ್ಟಣದ ಎಂ.ಎ. ಗೋಪಾಲಸ್ವಾಮಿಯನ್ನು ಕಳಿಸಿದ್ದರು. ಐದು ಕೋಟಿ ರೂಪಾಯಿ ಕ್ಯಾಶ್‌ ಅನ್ನೂ ಕೊಟ್ಟು ಕಳಿಸಿದ್ದರು. ಈ 100 ಕೋಟಿ ರೂಪಾಯಿ ಆಫರ್ ಮಾಡಿದ್ದು ಡಿ.ಕೆ. ಶಿವಕುಮಾರ್ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳಂಕ ತರಬೇಕು. ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ನನ್ನನ್ನು ಬಳಸಿಕೊಳ್ಳಲು ನೋಡಿದರು. ಅದಕ್ಕೆ ನಾನು ಒಪ್ಪದೇ ಇದ್ದಾಗ ಮೊದಲಿಗೆ ಅಟ್ರಾಸಿಟಿ ಕೇಸ್ ದಾಖಲು ಮಾಡಿದರು. ಅದರಲ್ಲಿ ಡಾಕ್ಯುಮೆಂಟ್ ಸಿಗಲಿಲ್ಲ .ನನ್ನ ಮೇಲೆ ಹಾಕಲಾದ ಅಟ್ರಾಸಿಟಿ ಕೇಸ್‌ನಲ್ಲಿ ಯಾವುದೇ ಪ್ರಯೋಜನ ಆಗಿಲ್ಲವೆಂದು ಮತ್ತೊಬ್ಬಳ ಕೈಯಲ್ಲಿ 354a ಕೇಸ್ ಹಾಕಿಸಿದರು. ಅದೂ ವಿಫಲವಾದ ಮೇಲೆ ರೇಪ್ ಕೇಸ್ ಹಾಕಿಸಿದರು. ಈ ಅತ್ಯಾಚಾರ ಪ್ರಕರಣದಲ್ಲಿಯೂ ಅವರಿಗೆ ಯಾವುದೇ ದಾಖಲೆಗಳು ಸಿಗಲಿಲ್ಲ. ನಾಲ್ಕು ದಿನಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದ್ದಾರೆ. ಪೆನ್‌ಡ್ರೈವ್‌ ಸಿಕ್ಕಿದ್ದನ್ನು ಕೋರ್ಟ್‌ನಲ್ಲಿ ಸೀಜ್‌ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!