ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪೆನ್ ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇದ್ದಾರೆ. ಪ್ರಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್ ಟ್ವೀಟ್ ಮಾಡಿದ್ದು, ‘CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್’ ಆರೋಪ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದೇ ಇದರ ಹಿಂದಿರುವ ಸಂಚಾಗಿದೆ ಎಂದು ಜೆಡಿಎಸ್ ಟ್ವೀಟ್ ಮೂಲಕ ಆರೋಪ ಮಾಡಿದೆ.
ಜೆಡಿಎಸ್ ಟ್ವೀಟ್‌ನಲ್ಲೇನಿದೆ?
“CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್”
1.ಡಿಸಿಎಂ ಡಿ.ಕೆ.ಶಿವಕುಮಾರ್
2.ಕೃಷಿ ಸಚಿವ ಚೆಲುವರಾಯಸ್ವಾಮಿ
3.ಕಂದಾಯ ಸಚಿವ ಕೃಷ್ಣಭೈರೇಗೌಡ
4. IT BT ಸಚಿವ ಪ್ರಿಯಾಂಕ್ ಖರ್ಗೆ
+
ಇನ್ನೂ ಒಬ್ಬ ಸಚಿವ
+
ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ
ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದಾಗಿದೆ. ಈ ಸಂಚು ಸಾಕಾರಗೊಳಿಸಲು CD ಶಿವಕುಮಾರ್ ಸಾಹೇಬರು ವಕೀಲರಾದ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ 100 ಕೋಟಿ ರೂಪಾಯಿ’ ಎಂದು ಜೆಡಿಎಸ್ ಟ್ವೀಟ್‌ನಲ್ಲಿ ಉಲ್ಲೇಖಿಸಿದೆ.