ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರು ಜಾರ್ಖಂಡ್ ಕಾಂಗ್ರೆಸ್ ನಾಯಕ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರನ್ನು 6 ದಿನಗಳ ಇಡಿ ಕಸ್ಟಡಿಗೆ ಕಳುಹಿಸಲಾಗಿತ್ತು. ಇದೀಗ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಚಂಪೈ ಸೊರೆನ್ ಅವರಿಗೆ ಆಲಂಗೀರ್ ಆಲಂ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಲಾಗಿದೆ. ಅವರ ರಾಜೀನಾಮೆಯನ್ನು ಅಂಗೀಕರಿಸಿರುವ ಮುಖ್ಯಮಂತ್ರಿ ಅವರನ್ನು ಸಂಪುಟದಿಂದ ಕೈಬಿಡುವಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಹಣ ವಸೂಲಾತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಇಡಿ ಸಮನ್ಸ್ ನೀಡಿದ ನಂತರ ಗುರುವಾರ (ಮೇ 16) ಆಲಂಗೀರ್ ಅವರನ್ನು 6 ದಿನಗಳ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ. ಅವರ ವೈಯಕ್ತಿಕ ಕಾರ್ಯದರ್ಶಿ ಸಂಜಯ್ ಲಾಲ್ ಅವರ ಮನೆಕೆಲಸಗಾರ ಜಹಾಂಗೀರ್ ಆಲಂ ಅವರ ಮನೆಯಿಂದ 35 ಕೋಟಿ ರೂ. ಹಣವನ್ನು ಇಡಿ ವಶಪಡಿಸಿಕೊಂಡಿತ್ತು. ನಗದು ವಶಪಡಿಸಿಕೊಂಡ ನಂತರ ಇಡಿ ಈಗಾಗಲೇ ಲಾಲ್ ಮತ್ತು ಜಹಾಂಗೀರ್ ಅವರನ್ನು ಬಂಧಿಸಿತ್ತು.