ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಕೆಲವೆಡೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣದ ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಗಾಳಿಯು ಗಂಟೆಗೆ 40-50 ಕಿ.ಮೀ. ಬಿಸಲಿದೆ ಎನ್ನಲಾಗಿದೆ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು. ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.