ಹೊಸದಿಗಂತ ಡಿಜಿಟಲ್ ಡೆಸ್ಕ್:
ಶುಕ್ರವಾರ ರಾತ್ರಿ ಹರಿಯಾಣದ ನುಹ್ ಜಿಲ್ಲೆಯ ಸಮೀಪದ ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್ಪ್ರೆಸ್ವೇಯಲ್ಲಿ ಪ್ರಯಾಣಿಸುತ್ತಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಗೊಂಡವರನ್ನು ಚಿಕಿತ್ಸೆಗಾಗಿ ನುಹ್ ವೈದ್ಯಕೀಯ ಕಾಲೇಜಿಗೆ ಕರೆತರಲಾಗಿದೆ ಎಂದು ವರದಿ ಲಭ್ಯವಾಗಿದೆ. ಬಸ್ನಲ್ಲಿ ವೃಂದಾವನದಿಂದ ಹಿಂತಿರುಗುತ್ತಿದ್ದ ಭಕ್ತರು ಇದ್ದರು ಎಂದು ವರದಿಯಾಗಿದೆ.
ಘಟನೆಯ ಬಗ್ಗೆ ನುಹ್ ಶಾಸಕ ಅಫ್ತಾಬ್ ಅಹ್ಮದ್ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಘಟನೆಯಲ್ಲಿ ವೃದ್ಧರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.