ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊಲೆಗಳು ಹಾಗೂ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಸಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಒಂದೇ ತಿಂಗಳೊಳಗೆ ಹುಬ್ಬಳ್ಳಿ ನಗರದಲ್ಲಿ ಎರಡು ಭೀಕರ ಕೊಲೆಗಳು ನಡೆದಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಸ್ವತಃ ಆಡಳಿತಾರೂಢ ಕಾಂಗ್ರೆಸ್ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಘಟನೆಗಳ ನಂತರ ದೂರು ದಾಖಲಾಗಿದೆ.
ಮಾಜಿ ಸಿಎಂ ಡಿವಿ ಸದಾನಂದ ಗೌಡ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿಸಿಕೆ ರಾಮಮೂರ್ತಿ, ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ನಿಯೋಗದಲ್ಲಿದ್ದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳುವಂತೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಡಿಜಿಪಿ ಕಚೇರಿಗೆ ಮನವಿ ಸಲ್ಲಿಸಲಾಗಿದೆ.