ಹೊಸದಿಗಂತ ವರದಿ, ಬನವಾಸಿ:
ಗುಡುಗು ಮಳೆಗೆ ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆಯಿತು. ಸಂಜೆಯ ವೇಳೆ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿತ್ತು. ಈ ವೇಳೆ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದ ಶಾಜಿದ್ ಆಸ್ಪಕ್ ಆಲಿ(16) ಎಂಬ ಬಾಲಕ ಸಿಡಿಲು ಬಡಿದು ಮೃತಪಟ್ಟಿದ್ದಾನೆ.
ಇಲ್ಲಿನ ಮೀನು ಮಾರ್ಕೆಟ್ ರಸ್ತೆಯ ನಿವಾಸಿಯಾಗಿರುವ ಮೃತ ಗೆಳೆಯರೊಂದಿಗೆ ಮೈದಾನದಲ್ಲಿ ಆಟವಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.