ಹುಬ್ಬಳ್ಳಿ-ಧಾರವಾಡದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣ: ಎಡಿಜಿಪಿ ಅರ್ ಹಿತೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿಯ ನೇಹಾ, ಅಂಜಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯ ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅರ್ ಹಿತೇಂದ್ರ ಅವರು ಹುಬ್ಬಳ್ಳಿ ನಗರಕ್ಕೆ ಭೇಟಿ ನೀಡಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ವ್ಯಾಪ್ತಿಯಲ್ಲಿ ಹಲವು ಘಟನೆಗಳು ನಡೆದಿವೆ. ಎಲೆಕ್ಷನ್ ಸಹ ಇತ್ತು, ಇದೇ ವೇಳೆ ಇಬ್ಬರು ಯುವತಿಯರ ಕೊಲೆಯಾಗಿದೆ. ಪೊಲೀಸ್ ಇಲಾಖೆಯ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯಗಳು ಬಂದಿದ್ದವು. ಹೀಗಾಗಿ ನಾನೆ ಬಂದು ಸಭೆ ಮಾಡಿದ್ದೇನೆ ಎಂದು ತಿಳಿಸಿದರು.

ಪ್ರಕರಣ ಕುರಿತಂತೆ ಸಮಗ್ರ ಮಾಹಿತಿ ಪಡೆದಿದ್ದೇನೆ.ಆದರೆ ಇಲಾಖೆಯ ಆಂತರಿಕ ವಿಚಾರ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಆದರೆ ಕ್ರೈಂ ಅಂಕಿ ಅಂಶಗಳ ಬಗ್ಗೆ ನಾವು ಪರಿಶೀಲನೆ ಮಾಡುತ್ತಿದ್ದೇವೆ. ಅಪರಾಧಗಳ ಅಂಕಿ ಅಂಶ ನೋಡಿದರೆ ಹಿಂದಿಗಿಂತ ಈ ಸಲ ಕಡಿಮೆ ಇದೆ. ಆದರೆ ಹುಬ್ಬಳ್ಳಿ ಧಾರವಾಡ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಮೂಡಿದೆ ಎಂದರು.

ಸಭೆಯಲ್ಲಿ ಪೊಲೀಸರಿಗೆ ಕೆಲ ಸೂಚನೆಗಳನ್ನು ಕೊಟ್ಟಿದ್ದೇನೆ. ಇದರಂತೆ ಅಪರಾಧ ಪ್ರಕರಣ ಕಡಿಮೆ ಮಾಡಲು ಕ್ರಮ ತೆಗೆದುಕೊಳ್ಳುತ್ತಾರೆ. ಸಾರ್ವಜನಿಕರಲ್ಲಿ ನಂಬಿಕೆ ಮೂಡಿಸುವ ಕೆಲಸ ಪೊಲೀಸರು ಮಾಡಲಿದ್ದಾರೆ. ಹುಬ್ಬಳ್ಳಿ ಧಾರವಾಡ ನಗರದಲ್ಲಿ ಗಾಂಜಾಮತ್ತಿತರ ಚಟುವಟಿಕೆ ಹೆಚ್ಚಾಗಿರುವ ವಿಚಾರವಾಗಿ ಮಾತನಾಡಿದವರು ಗಾಂಜಾಪತ್ತೆ ಕೇಸ್ ಸಹ ಹೆಚ್ಚು ದಾಖಲಿಸಿದ್ದಾರೆ ಈ ಕುರಿತು ಇನ್ನು ಕ್ರಮ ಕೈಗೊಳ್ಳುತ್ತಾರೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!