ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಉಜ್ಜಯಿನಿ ಲೋಕಸಭಾ ಕ್ಷೇತ್ರದ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಉಜ್ವಲ್ ರಮಣ್ ಸಿಂಗ್ ಅವರ ಪರ ಮತಯಾಚನೆಗೆ
ಪ್ರಯಾಗರಾಜ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ವಾರಾಣಸಿ ಕ್ಷೇತ್ರವನ್ನು ಮಾತ್ರ ಗೆಲ್ಲಲಿದ್ದಾರೆ ಎಂದು ಹೇಳಿದರು.
ನಮ್ಮ ಮೊದಲ ಸಂಘರ್ಷ ಸಂವಿಧಾನದ ಉಳಿವಿಗಾಗಿ. ಬಿಜೆಪಿ ಹಾಗೂ ಆರ್‌ಎಸ್‌ಎಸ್ ಅದರ ಮೇಲೆ ದಾಳಿ ಮಾಡುತ್ತಿವೆ. ಯಾವ ಶಕ್ತಿಗೂ ಸಂವಿಧಾನವನ್ನು ಹರಿದು ಬಿಸಾಕುವ ಶಕ್ತಿ ಇಲ್ಲ ಎಂದು ನುಡಿದರು.
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಪಡಿಸುವ ಕಾನೂನು ತರಲಿದ್ದೇವೆ. ಯುವಕರಿಗೆ ಉದ್ಯೋಗ ನೀಡಲಿದ್ದೇವೆ. ಅಗ್ನಿವೀರ್ ಯೋಜನೆಯನ್ನು ಕಸದ ತೊಟ್ಟಿಗೆ ಬಿಸಾಡಲಿದ್ದೇವೆ ಎಂದು ಹೇಳಿದರು.
Bjp got 80