ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ: ಭಾರತದಲ್ಲಿ ಒಂದು ದಿನದ ಶೋಕಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ (Iran) ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಮೃತಪಟ್ಟಿದ್ದು, ಇವರ ಗೌರವಾರ್ಥ ಭಾರತ ದೇಶಾದ್ಯಂತ ಮಂಗಳವಾರ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ.

ಡಾ. ಸೆಯ್ಯದ್ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾಗಿದ್ದಾರೆ. ಇವರ ಆತ್ಮಗಳಿಗೆ ಗೌರವ ಸೂಚಕವಾಗಿ ಮಂಗಳವಾರ ಪ್ರತಿನಿತ್ಯ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು (National Flag) ಅರ್ಧ ಎತ್ತರದಲ್ಲಿ ಹಾರಿಸಲಾಗುತ್ತದೆ ಮತ್ತು ಅಂದು ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಭಾನುವಾರ ರೈಸಿ ಪಯಣಿಸ್ತಿದ್ದ ಹೆಲಿಕಾಪ್ಟರ್ ಪ್ರಕೃತಿ ವೈಪರಿತ್ಯದ ಪರಿಣಾಮ ಜೋಲ್ಫಾ ನಗರ ಬಳಿಯ ದಟ್ಟ ಕಾನನದಲ್ಲಿ ಪತನವಾಗಿದೆ. ದುರಂತದಲ್ಲಿ ಅಧ್ಯಕ್ಷ ರೈಸಿ, ವಿದೇಶಾಂಗ ಮಂತ್ರಿ ಹುಸೈನ್ ಅಮಿರ್ ಅಬ್ದುಲ್ಲಲಹಿಯನ್, ಅಜರ್‌ಬೈಜಾನ್ ಪ್ರಾಂತ್ಯದ ಗವರ್ನರ್‌ ಮಲಿಕ್ ಸೇರಿ ಹಲವರು ಮೃತಪಟ್ಟಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!