Sunday, January 11, 2026

SHOCKING | ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಯನ್ನು ವಿಷ ಕುಡಿಸಿ ಕೊಲ್ಲಲಾಗಿದೆ.

ಸುನಾಮಗಂಜ್ ಜಿಲ್ಲೆಯಲ್ಲಿ ಜಾಯ್ ಮಹಾಪಾತ್ರೋ ಎಂಬ ಹಿಂದು ಯವಕನ ಮೇಲೆ ದಾಳಿ ಮಾಡಿದ್ದ ದುಷ್ಕರ್ಮಿಗಳು, ಥಳಿಸಿ ಆತನಿಗೆ ವಿಷ ಕುಡಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಆತ ಸಾವನ್ನಪ್ಪಿದ್ದಾನೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾಪಾತ್ರೋ ಕುಟುಂಬಸ್ಥರು, ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿ, ವಿಷಪ್ರಾಶನ ಮಾಡಿದ್ದಾರೆ. ನಂತರ ಆತನನ್ನು ಸಿಲ್ಹೆಟ್ ಎಂಎಜಿ ಉಸ್ಮಾನಿ

ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಮಹಾಪಾತ್ರೋ ನಿಧನ ಹೊಂದಿದ್ದಾನೆ ಎಂದು ತಿಳಿಸಿದ್ದಾರೆ.

ಬಾಂಗ್ಲಾದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ಹೆಚ್ಚಾಗುತ್ತಿದೆ. ಇತ್ತೀಚೆಗೆ 3 ವಾರಗಳಲ್ಲಿ ಅಲ್ಪಸಂಖ್ಯಾತರ ಮೇಲೆ 5ನೇ ದಾಳಿ ನಡೆದಿದೆ.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!