ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯ ವೈಟ್‍ಫೀಲ್ಡ್ ನಲ್ಲಿ ನಡೆದಿದ್ದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಇದೀಗ ಸ್ಫೋಟಕ ತಿರುವೊಂದು ಸಿಕ್ಕಿದೆ. ಬ್ಲಾಸ್ಟ್ ಪ್ರಕರಣದಲ್ಲಿ ಇಬ್ಬರು ವೈದ್ಯರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಕೊಯಮತ್ತೂರು ಖಾಸಗಿ ಆಸ್ಪತ್ರೆಯ ಮೇಲೆ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆಯು ದಾಳಿ ನಡೆಸಿದೆ. ಬ್ಲಾಸ್ಟ್ ಪ್ರಕರಣದಲ್ಲಿ ತಮಿಳುನಾಡಿನ ನಾರಾಯಣಗುರು ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕರ್ನಾಟಕ ಮೂಲದ ಇಬ್ಬರು ಭಾಗಿಯಾಗಿರುವ ಅನುಮಾನ ಮೂಡಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಶೀಘ್ರವೇ ವೈದ್ಯರ ಹೆಸರುಗಳು ಹೊರಬೀಳಲಿದೆ.