ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನಲ್ಲಿ ಕಲುಶಿತ ನೀರು ಸೇವನೆ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ನೀರು ಸೇವನೆ ಮಾಡಿದ ಕಾರಣ ಹಲವರು ಅಸ್ವಸ್ಥರಾಗಿದ್ದಾರೆ. ಮೈಸೂರಿನ ಸಾಲುಂಡಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಅಸ್ವಸ್ಥರಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕನಕರಾಜ್(20) ಮೃತ ವ್ಯಕ್ತಿಯಾಗಿದ್ದು, ಅಸ್ವಸ್ಥಗೊಂಡು ವಾಂತಿಯಾದ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾರೆ. ಇದೇ ರೋಗಲಕ್ಷಣಗಳನ್ನು ಹೊಂದಿರುವ ಇನ್ನೂ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.