ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಒಂದಲ್ಲಾ ಒಂದು ಸಮಸ್ಯೆ ಬಾಧಿಸುತ್ತಲೇ ಇರುತ್ತವೆ, ಇದೀಗ ವೆಸ್ಟ್ ನೈಲ್ ಜ್ವರದ ಆತಂಕ ಹೆಚ್ಚಾಗಿದೆ.
ಕ್ಯೂಲೆಕ್ಸ್ ಸೊಳ್ಳೆಗಳಿಂದ ವೆಸ್ಟ್ ನೈಲ್ ಜ್ವರದ ಆತಂಕ ಶುರುವಾಗಿದ್ದು, ಕೇರಳ ಸೇರಿದಂತೆ ಪಕ್ಕದ ರಾಜ್ಯಗಳಲ್ಲಿ ವೆಸ್ಟ್ ನೈಲ್ ಜ್ವರದ ಪ್ರಕರಣಗಳು ಹೆಚ್ಚಾಗಿವೆ. ತಮಿಳನಾಡಿನ ಬಳಿಕ ಈಗ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ವರದಿಯಾಗಿದೆ. ಇದರಿಂದ ಬೆಂಗಳೂರಿಗೂ ವೆಸ್ಟ್ ನೈಲ್ ಜ್ವರದ ಆತಂಕ ಶುರುವಾಗಿದೆ.
ಕಾಲರಾ, ಡೆಂಘಿ ಜ್ವರ, ನಿಫಾ, ಹಕ್ಕಿಜ್ವರ, ಹಂದಿಜ್ವರ ನಂತರ ಈಗ ವೆಸ್ಟ್ ನೈಲ್ ಜ್ವರದ ಸರದಿ ಶುರುವಾಗಿದೆ. ನೆರೆಯ ತಮಿಳನಾಡು ಹಾಗೂ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ. ವೆಸ್ಟ್ ನೈಲ್ ಜ್ವರ ಸಮಾನ್ಯ ಜ್ವರಕ್ಕಿಂತ ವಿಭಿನ್ನವಾಗಿದ್ದು ತೀವ್ರ ಅನಾರೋಗ್ಯಕ್ಕೆ ಕಾರಣವಾಗುತ್ತಿದೆ.
ಆರಂಭದಲ್ಲಿ ವೆಸ್ಟ್ ನೈಲ್ ಜ್ವರದಲ್ಲಿ ಯಾವುದೇ ರೋಗಲಕ್ಷಣಗಳು ಕಾಣಿಸುವುದಿಲ್ಲ. ಇದೇ ದೊಡ್ಡ ಸಮಸ್ಯೆಯಾಗಿದೆ. ಅಂಗಾಂಗ ಕಸಿ, ರಕ್ತ ವರ್ಗಾವಣೆ ಅಥವಾ ಗರ್ಭಾವಸ್ಥೆಯಲ್ಲಿ ಅಥವಾ ಹಾಲುಣಿಸುವ ಸಮಯದಲ್ಲಿ ತಾಯಿಯಿಂದ ಮಗುವಿಗೆ ಈ ವೈರಸ್ ಹರಡುವ ಸಾಧ್ಯತೆ ಇದ್ದು ಸೂಕ್ತ ಮುನ್ನೆಚ್ಚರಿಕೆ ಅಗತ್ಯ ಎಂದು ವೈದ್ಯರು ಹೇಳಿದ್ದಾರೆ.