ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿನಿಮೀಯ ರೀತಿಯಲ್ಲಿ ಡಿವೈಎಸ್ಪಿ ಒಬ್ಬರ ಬ್ಯಾಂಕ್ ಖಾತೆಗೆ ಕನ್ನ ಹಾಕಿ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.
ಮಡಿಕೇರಿಯ ಕೆನರಾ ಬ್ಯಾಂಕ್ ಮುಖ್ಯಶಾಖೆ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್ನ ಶಾಖೆಯಲ್ಲಿ ಪಿ.ಕೆ.ಮುರಳೀಧರ್ ಖಾತೆಗಳನ್ನು ಹೊಂದಿದ್ದಾರೆ.