ಹೊಸದಿಗಂತ ಡಿಜಿಟಲ್ ಡೆಸ್ಕ್:
2019ರಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ ಈ ಬಾರಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಒಡಿಶಾದಲ್ಲಿ ಬಿಜೆಪಿಯ ಮತ ಹಂಚಿಕೆ ಮತ್ತು ಸ್ಥಾನಗಳಲ್ಲಿ ಏರಿಕೆಯಾಗಲಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಮಂಗಳವಾರ ಭವಿಷ್ಯ ನುಡಿದಿದ್ದಾರೆ.
ಇದರ ನಡುವೆ ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 30 ಸ್ಥಾನಗಳನ್ನು ಗೆಲ್ಲಲಿದೆ ಎಂದು ಗೃಹ ಸಚಿವ ಅಮಿತ್ ಶಾ ಇಂದು ಭವಿಷ್ಯ ನುಡಿದಿದ್ದಾರೆ.
ಪುರ್ಬಾ ಮೇದಿನಿಪುರ ಜಿಲ್ಲೆಯ ಕಾಂತಿಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 30 ಸ್ಥಾನಗಳನ್ನು ಗೆದ್ದರೆ, ಟಿಎಂಸಿ ವಿಭಜನೆಯಾಗುತ್ತದೆ ಮತ್ತು ಮಮತಾ ಬ್ಯಾನರ್ಜಿ ಅವರ ಸರ್ಕಾರ ಖಂಡಿತವಾಗಿಯೂ ಪತನವಾಗಲಿದೆ ಎಂದು ತಿಳಿಸಿದ್ದಾರೆ.