ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ಎಲ್ಲಿದ್ದಾನೋ ಗೊತ್ತಿಲ್ಲ, ನನ್ನನ್ನು ಬಿಟ್ಟುಬಿಡಿ, ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ವಿಷಯದ ಬಗ್ಗೆ ಪ್ರಶ್ನೆ ಕೇಳಬೇಡಿ ಎಂದು ಎಚ್.ಡಿ. ರೇವಣ್ಣ ಮಾಧ್ಯಮಕ್ಕೆ ಮನವಿ ಮಾಡಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಸ್ತುತ ನ್ಯಾಯಾಲಯದ ಅಂಗಳದಲ್ಲಿದೆ, ಈ ವಿಚಾರ ಪ್ರಸ್ತುತ ನ್ಯಾಯಾಲಯದ ಮುಂದಿರುವ ಕಾರಣ ಈ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು.
ಪ್ರಜ್ವಲ್ ಇರುವಿಕೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಹಗರಣದ ಬಗ್ಗೆ ಏನನ್ನೂ ಕೇಳಬೇಡಿ. ಸೂಕ್ತ ಸಮಯದಲ್ಲಿ ಎಲ್ಲದಕ್ಕೂ ಪ್ರತಿಕ್ರಿಯೆ ನೀಡುತ್ತೇನೆ. ನಾನು ಈಗ ಯಾವುದಕ್ಕೂ ಉತ್ತರ ಕೊಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದ್ದಾರೆ.
Gottilade yenu illa berevara hennmakklu sheela docha bekandre yelli hogittu ivella