ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಥಾಣೆ ಜಿಲ್ಲೆಯ ಡೊಂಬಿವಿಲಿಯಲ್ಲಿರುವ ರಾಸಾಯನಿಕ ಘಟಕದಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸ್ಥಾವರದಲ್ಲಿ ನಾಲ್ಕು ಬಾಯ್ಲರ್ಗಳು ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಡೊಂಬಿವಿ ಎಂಐಡಿಸಿ 2ನೇ ಹಂತದ ಆವರಣದಲ್ಲಿ ಈ ಘಟನೆ ನಡೆದಿದೆ.
ಪ್ರಾಥಮಿಕ ವರದಿಗಳ ಪ್ರಕಾರ ಸ್ಥಾವರದಲ್ಲಿ ಸಂಗ್ರಹಿಸಲಾಗಿದ್ದ ರಾಸಾಯನಿಕಗಳು ಬೆಂಕಿಗೆ ಆಹುತಿಯಾಗಿ ದೊಡ್ಡ ಬೆಂಕಿಗೆ ಕಾರಣವಾಗಿವೆ. ಸುತ್ತಮುತ್ತಲಿನ ಪ್ರದೇಶಗಳಿಗೂ ಬೆಂಕಿ ವ್ಯಾಪಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.