ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದಲ್ಲಿ ಲಾರಿಯೊಂದು ಮಿನಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ 25 ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಬಾಲಾದಲ್ಲಿ ಮಿನಿ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಮಂದಿ ಗಾಯಗೊಂಡಿದ್ದಾರೆ.
ಕಳೆದ ವಾರವಷ್ಟೇ, ರಾಜ್ಯದ ನುಹ್ ಪ್ರದೇಶದಲ್ಲಿ ಟೂರಿಸ್ಟ್ ಬಸ್ಗೆ ಬೆಂಕಿ ಹೊತ್ತಿಕೊಂಡ ಒಂಬತ್ತು ಜನರು ಸಜೀವ ದಹನವಾಗಿದ್ದರು ಮತ್ತು 15 ಮಂದಿ ಗಾಯಗೊಂಡಿದ್ದರು.