SHOCKING | ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ, 11 ಪೊಲೀಸರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲಾಕಪ್‌ಡೆತ್‌ ಆರೋಪದ ಮೇಲೆ ಮೃತನ ಸಂಬಂಧಿಕರು ಚನ್ನಗಿರಿ ಪೊಲೀಸ್​ ಠಾಣೆ ಮೇಲೆ ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ  11 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಉಮಾ ಪ್ರಶಾಂತ ಮಾತನಾಡಿ, ಮೃತ ಆದಿಲ್​ನನ್ನು​ ಶುಕ್ರವಾರ ಪೊಲೀಸರು ಠಾಣೆಗೆ ಕರೆತಂದರು. ಬಳಿಕ ಆದಿಲ್​ ಠಾಣೆಯಲ್ಲಿ ಕುಸಿದು ಬೀಳುತ್ತಾರೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಆದಿಲ್​ ಪೊಲೀಸ್ ಠಾಣೆಯಲ್ಲಿ 6-7 ನಿಮಿಷ ಕೂಡ ಇಲ್ಲ ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಒಪ್ಪದ ಮೃತರ ಸಂಬಂಧಿಕರು ಆತನನ್ನು ಠಾಣೆಯಲ್ಲಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಹಲ್ಲೆ ಮಾಡಿದ್ದಾರೆ.10ಕ್ಕೂ ಹೆಚ್ಚು ಪೊಲೀಸ್ ವ್ಯಾನ್​ಗಳು ಜಖಂ‌ಗೊಂಡಿವೆ.

ನಮ್ಮಲ್ಲಿ ‌ ಸಿಸಿ‌ಕ್ಯಾಮರಾ ಇದೆ. ಎಲ್ಲ ಪರಿಶೀಲನೆ ಮಾಡಲಾಗುತ್ತಿದೆ.‌ ಪ್ರಮಾಣಿಕ ತನಿಖೆ ಮಾಡುತ್ತೇವೆ. ಮೃತರ ತಂದೆ ದೂರು ಕೊಟ್ಟಿದ್ದಾರೆ. ತನಿಖೆ ಆಗುತ್ತದೆ.‌ ಈಗಾಗಲೇ ಶವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.‌ ಗಂಭೀರ ಪ್ರಕರಣ ಆದ ಹಿನ್ನೆಲೆ ನ್ಯಾಯಾಧೀಶರ ಸಮ್ಮುಖದಲ್ಲಿ ಶವ ಪರೀಕ್ಷೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here