ಮಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಉರುಳಿದ ಆಟೋ :ಚಾಲಕ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಗಳೂರಿನಲ್ಲಿ ನಿನ್ನೆ ರಾತ್ರಿ ಎಡೆಬಿಡದೆ ಮಳೆ ಸುರಿದಿದ್ದು, ಮಳೆಯಿಂದಾಗಿ ರಾಜಕಾಲುವೆಗೆ ಆಟೋ ಬಿದ್ದು ಚಾಲಕ ಮೃತಪಟ್ಟಿದ್ದಾನೆ.

ಆಟೋ ಚಾಲಕ ದೀಪಕ್‌ ಕೊಟ್ಟಾರದಲ್ಲಿ ತುಂಬಿ ಹರಿಯುತ್ತಿದ್ದ ರಾಜಕಾಲುವೆಗೆ ಬಿದ್ದು ಮೃತಪಟ್ಟಿದ್ದಾರೆ. ಈ  ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ನೀರು ರಸ್ತೆಗೆ ಬಂದಿದೆ. ರಸ್ತೆ ಹಾಗೂ ರಾಜಕಾಲುವೆಗೆ ಸಮಾನವಾಗಿ ನೀರು ಹರಿಯುತ್ತಿತ್ತು. ರಾತ್ರಿ ವೇಳೆ ಆ ರಸ್ತೆಯಲ್ಲಿ ಸಂಚರಿಸುವಾಗ ಆಟೋ ರಾಜಕಾಲುವೆಗೆ ಉರುಳಿ ಘಟನೆ ಸಂಭವಿಸಿದೆ.

ಇನ್ನು ಘಟನೆಯಿಂದ ಸಾರ್ವಜನಿಕರು ಕೆಂಡಾಮಂಡಲರಾಗಿದ್ದು, ಆಟೋ ಚಾಲಕನ ಸಾವಿಗೆ ಮಂಗಳೂರು ಮಹಾನಗರ ಪಾಲಿಕೆ ನಿರ್ಲಕ್ಷ್ಯವೇ ಕಾರಣ ಎಂದು ದೂಷಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!