ಉಡುಪಿ ಗ್ಯಾಂಗ್‌ವಾರ್‌ ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್: ಕುಟುಕಿದ ಬಿಜೆಪಿ!

ಹೊಸದಿಗಂತ ವರದಿ ಮಂಗಳೂರು:

ಎರಡು ಗುಂಪಿನ ನಡುವೆ ಭಯಾನಕ ಗ್ಯಾಂಗ್ ವಾರ್ ನಡೆದಿರುವ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕಾಪು ಮೂಲದ ಎರಡು ಬಣದ ಯುವಕರು ಉಡುಪಿ- ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ ಮಾಡಿಕೊಂಡು ಕಾರುಗಳನ್ನು ಗುದ್ದಿಸಿ ಹೊಡೆದಾಟ ಮಾಡಿಕೊಂಡಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಜೂನ್ 1ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಗ್ಯಾಂಗ್ ವಾರ್ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ಗ್ಯಾಂಗ್ ವಾರ್‌ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್‌ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕೈಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆ ಎಂದು ಬಿಜೆಪಿ ಟ್ವೀಟ್‌ ಮೂಲಕ ಕಿಡಿ ಕಾರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!