ರಾಜ್ಯದಲ್ಲಿ ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ: ಆರ್. ಅಶೋಕ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ ಎಂದು ಆರ್ ಅಶೋಕ್ ಕಿಡಿಕಾರಿದರು.

ಶಿವರಾಮೇಗೌಡ ಎನ್ನುವ ವ್ಯಕ್ತಿ ಹೇಳುತ್ತಾನೆ, ಮೋದಿಗೆ ಹೇಳಿ ಜೆಡಿಎಸ್ -ಬಿಜೆಪಿ ಭಾಗ ಮಾಡಿಬಿಟ್ಟರೆ ನಮಗೆ ಒಳ್ಳೆಯದು. ಇವರೆಂಥಾ ಚಂಡಾಳರು ಎನ್ನುವುದು ಇದರಿಂದ ಗೊತ್ತಾಗುತ್ತದೆ. ಮುಂದಿನ ವಿಧಾನಸಭೆ ಚುನಾವಣೆವರೆಗೂ ಇವರು ಒಂದಾಗಿದ್ದರೆ ನಮಗೆ ಉಳಿಗಾಲ ಇಲ್ಲ ಎನ್ನುವುದು ಅವರ ಹೆದರಿಕೆ ಎಂದು ಹೇಳಿದ್ದಾರೆ.

ಇವರು ಹಿಂದಿನ ಮೈತ್ರಿ ಸರ್ಕಾರದ ವೇಳೆ ಕುಮಾರಸ್ವಾಮಿ ಅವರ ಬೆನ್ನಿಗೆ ಚೂರಿ ಹಾಕಿದರು ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಶೋಕ್ ಅವರು; ಕೆಲಸ ಆಗಬೇಕಾದರೆ ಕೈ ಎತ್ತು. ಕೆಲಸ ಆದ ಮೇಲೆ ಚೂರಿ ಹಾಕು. ಇದೇ ಕಾಂಗ್ರೆಸ್ ನೀತಿ. ನಾನು ಹದಿನಾಲ್ಕು ತಿಂಗಳು ದುಷ್ಟರ ಸಹವಾಸ ಮಾಡಿದ್ದೆ, ಅವರನ್ನು ನನ್ನನ್ನು ಕ್ಲರ್ಕ್, ಜವಾನನ ರೀತಿ ನಡೆಸಿಕೊಂಡರು ಎಂದರು.

ಕಾಂಗ್ರೆಸ್ ಸರಕಾರ ಎಲ್ಲ ಕಡೆ ಲೂಟಿ ಮಾಡುತ್ತಿದೆ. ಈಗ ಬಿಡಿಎ ಕಾಂಪ್ಲೆಕ್ಸ್ ಗಳನ್ನು ಮಾರಾಟಕ್ಕೆ ಇಟ್ಟಿದೆ. ಹಿಂದೆ ಲಕ್ಷ್ಮಣರಾವ್ ಅವರಂಥ ಮಹಾನುಭಾವರು ಇವನ್ನೆಲ್ಲ ಕಾಪಾಡಿಕೊಂಡು ಬಂದಿದ್ದರು. ಸರ್ಕಾರದಲ್ಲಿ ಹಣ ಇಲ್ಲ. ಅವರ ವರಿಷ್ಠರಿಗೆ ಕಪ್ಪ ಕೊಡಲು ಇಲ್ಲಿ ಲೂಟಿ ಮಾಡಲು ಹೊರಟಿದ್ದಾರೆ ಎಂದು ಅಶೋಕ್ ಟೀಕಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!