ವಾಲ್ಮೀಕಿ ನಿಗಮದ ಅಧಿಕಾರಿ ಸಾವು: ಆತ್ಮಹತ್ಯೆ ಅಲ್ಲ, ಕೊಲೆ ಎಂದ ಆರ್.ಅಶೋಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವಾಲ್ಮೀಕಿ ಅಭಿವೃದ್ಧಿ‌ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಅಧಿಕಾರಿಯದ್ದು ಆತ್ಮಹತ್ಯೆಯಲ್ಲ, ಕೊಲೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ನಾಗೇಂದ್ರರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashoka) ಆಗ್ರಹಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಅಶೋಕ್, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಮೌಲ್ಯದ ಬೃಹತ್ ಭ್ರಷ್ಟಾಚಾರವನ್ನು ಅಧಿಕಾರಿಯ ತಲೆಗೆ ಕಟ್ಟಲು ಹೋಗಿ ಕಿರುಕುಳ ನೀಡಿ ಆತ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ ಈ ಕೊಲೆಗಡುಕ ಕಾಂಗ್ರೆಸ್ ಸರ್ಕಾರ . ಸಿಎಂ ಅವರೇ ಇದು ಆತ್ಮಹತ್ಯೆ ಅಲ್ಲ, ಕೊಲೆ. ಈ ಕೊಲೆಗೆ ಹೊಣೆ ಯಾರು? ನಿಮ್ಮ ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು‌? ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ 11,000 ಕೋಟಿ ರೂ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನ ಗ್ಯಾರಂಟಿ ಹೆಸರಿನಲ್ಲಿ ಲಪಟಾಯಿಸಿ ಈಗಾಗಲೇ ದಲಿತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡಿದ್ದೀರಿ. ಈಗ ಅಭಿವೃದ್ಧಿ ನಿಗಮದಲ್ಲಿ 85 ಕೋಟಿ ರೂ. ಭ್ರಷ್ಟಾಚಾರ (Corruption) ನಡೆಸಿ ಒಬ್ಬ ಅಧಿಕಾರಿಯ ಸಾವಿಗೆ ಕಾರಣರಾಗಿದ್ದೀರಿ. ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರನ್ನ ಸಂಪುಟದಿಂದ ವಜಾ ಮಾಡಬೇಕು. ಈ ಪ್ರಕರಣದ ತನಿಖೆಗೆ ಆದೇಶ ಮಾಡಿ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿ ಎಂದು ಒತ್ತಾಯಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!