ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನು ಕೆಲವೇ ದಿನಗಳಲ್ಲಿ ಗಣರಾಜ್ಯೋತ್ಸವ ಇದ್ದು, ಈ ವೇಳೆ ಪಾಕಿಸ್ತಾನ ಡ್ರೋನ್ ಮೂಲಕ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡಲು ನಡೆಸಿದ್ದ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ.
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಾರ್ಯಾಚರಣೆಯಿಂದ ಭದ್ರತಾ ಪಡೆಗಳು ಅಪಾಯವನ್ನು ತಪ್ಪಿಸಿವೆ.
ಅಧಿಕಾರಿಗಳ ಪ್ರಕಾರ, ಪಲೂರಾ ಗ್ರಾಮದಲ್ಲಿ ಸ್ಥಳೀಯರು ಅನುಮಾನಾಸ್ಪದ ಡ್ರೋನ್ ಚಲನವಲನವನ್ನು ಗಮನಿಸಿ ತಕ್ಷಣವೇ ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯ ಆಧಾರದಲ್ಲಿ ಆ ಪ್ರದೇಶದಲ್ಲಿ ಶೋಧನಾ ಕಾರ್ಯಾಚರಣೆ ಆರಂಭಿಸಲಾಯಿತು.
ಶೋಧದ ಸಮಯದಲ್ಲಿ, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನ 52ನೇ ಬೆಟಾಲಿಯನ್ ಸಿಬ್ಬಂದಿ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎರಡು ಪಿಸ್ತೂಲ್‌ಗಳು, ಒಂದು ಹ್ಯಾಂಡ್ ಗ್ರೆನೇಡ್, ಮೂರು ಮ್ಯಾಗಜೀನ್‌ಗಳು (ಗನ್‌ಗೆ ಗುಂಡು ತುಂಬುವ ಸಾಧನ) ಮತ್ತು 16 ಪಿಸ್ತೂಲ್ ಗುಂಡುಗಳನ್ನು ವಶಪಡಿಸಿಕೊಂಡರು.
ಪಾಕಿಸ್ತಾನವು ಒಳನುಸುಳುವಿಕೆ ನಿಗ್ರಹ ಜಾಲವನ್ನು ಬೇಧಿಸಲು ಮತ್ತು ಶಸ್ತ್ರಾಸ್ತ್ರಗಳನ್ನು ತಡೆಯಲು ಡ್ರೋನ್‌ಗಳನ್ನು ಬಳಸಲಾಗುತ್ತಿದೆ.ಪ್ರದೇಶದ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ಯಾವುದೇ ಅನುಮಾನಾಸ್ಪದ ಚಟುವಟಿಕೆ ಅಥವಾ ವಸ್ತು ಕಂಡುಬಂದಲ್ಲಿ ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸ್ಥಳೀಯ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ.

