ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಚ್.ಡಿ.ರೇವಣ್ಣ ತಮ್ಮ ವಿರುದ್ಧ ದಾಖಲಾದ 2 ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಹೊಳೆನರಸೀಪುರದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಕೆ.ಆರ್.ನಗರದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ.
ಪ್ರಕರಣಗಳಲ್ಲಿ ಹುರುಳಿಲ್ಲ, ಇದು ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ರೇವಣ್ಣ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇತ್ತೀಚೆಗೆ ಕೆ.ಆರ್.ನಗರದ ಸಂತ್ರಸ್ತೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಮೇ 13ರಂದು ಜಾಮೀನು ದೊರೆತಿತ್ತು.
ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರಿಗೆ ಮೇ 20ರಂದು ಜಾಮೀನು ಮಂಜೂರಾಗಿತ್ತು.
ಇದೀಗ ಎರಡು ಎಫ್‌ಐಆರ್ ರದ್ದು ಮಾಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.