ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತಿನ ಐತಿಹಾಸಿಕ ಸೋಮನಾಥ ದೇವಾಲಯದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮವಾದ ಸೋಮನಾಥ ಸ್ವಾಭಿಮಾನ್ ಪರ್ವದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ಸೋಮನಾಥಕ್ಕೆ ಆಗಮಿಸಿದರು.

ಈ ವೇಳೆ ದಾರಿಯುದ್ದಕ್ಕೂ ಸಾರ್ವಜನಿಕರು ಕೇಸರಿ ಬಾವುಟಗಳನ್ನು ಹಿಡಿದು, “ಮೋದಿ, ಮೋದಿ” ಎಂದು ಘೋಷಣೆ ಕೂಗುತ್ತಾ ಅದ್ದೂರಿಯಾಗಿ ಸ್ವಾಗತ ಕೋರಿದರು.

ಜನವರಿ 8ರಿಂದ 11 ರವರೆಗೆ ಸೋಮನಾಥ ಸ್ವಾಭಿಮಾನ ಪರ್ವ ಆಯೋಜಿಸಲಾಗಿದೆ.

