ಹೊಸದಿಗಂತ ಡಿಜಿಟಲ್ ಡೆಸ್ಕ್:
ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವೈದ್ಯೆ ಮೃತಪಟ್ಟಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.
25 ದಿನಗಳ ತರಬೇತಿಗಾಗಿ ಚೆನ್ನೈನ ಕಿಲ್ಪಾಕ್ಕಂ ಮನೋವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರೈನಿ ಡಾಕ್ಟರ್ ಆಗಿ ಬಂದಿದ್ದ ಡಾ.ಸರಣಿತಾ( 32) ಮೃತ ದುರ್ದೈವಿ. ಚೆನ್ನೈನ ಆಸ್ಪತ್ರೆಯಲ್ಲಿ ತರಬೇತಿ ಪಡೆಯಲು ಬಂದಿದ್ದ ಸರಣಿತಾ ತರಬೇತಿಗಾಗಿ ಅಯನವರಂನ ಹಾಸ್ಟೆಲ್‌ನಲ್ಲಿ ತಂಗಿದ್ದರು.
ಹಾಸ್ಟೆಲ್ ಕೊಠಡಿಯಲ್ಲಿ ಲ್ಯಾಪ್ ಟಾಪ್ ಚಾರ್ಜ್ ಮಾಡಲು ಯತ್ನಿಸುತ್ತಿದ್ದಾಗ ವಿದ್ಯುತ್ ಸ್ಪರ್ಶವಾಗಿದೆ. ಸ್ಥಳದಲ್ಲೇ ಸರಣಿತಾ ಮೃತಪಟ್ಟಿದ್ದಾರೆ.
ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.