ರಾಜ್ಯದಲ್ಲಿ ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗಾಳಿ (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 22 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.