ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾರಾಣಸಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ವಜಾಗೊಳಿಸಿದೆ.
ನ್ಯಾಯಮೂರ್ತಿ ಸಚಿನ್ ದತ್ತಾ ಅವರ ನೇತೃತ್ವದ ದೆಹಲಿ ಹೈಕೋರ್ಟ್ ಪೀಠವು ಅರ್ಜಿಯನ್ನು ‘ಮಾಲಾ ಫೈಡ್’ ಎಂದು ಪರಿಗಣಿಸಿ ವಜಾಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪೈಲಟ್ ಕ್ಯಾಪ್ಟನ್ ದೀಪಕ್ ಕುಮಾರ್ ಅವರು ಅರ್ಜಿ ಸಲ್ಲಿಸಿದ್ದು, ಪ್ರಧಾನಿ ಅವರು ಭಾರತದ ಸಂವಿಧಾನದ ಮೇಲೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುವುದಾಗಿ ಸುಳ್ಳು ಪ್ರಮಾಣ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
2024 ರ ಸಾರ್ವತ್ರಿಕ ಚುನಾವಣೆಯ ವಾರಾಣಸಿ ಕ್ಷೇತ್ರದ ಅಭ್ಯರ್ಥಿ ನರೇಂದ್ರ ಮೋದಿ ಅವರು ಭಾರತೀಯ ಸಂವಿಧಾನದ ಮೇಲೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದಲು ಚುನಾವಣಾ ಅಧಿಕಾರಿಯ ಮುಂದೆ ಸುಳ್ಳು ಪ್ರಮಾಣ ಅಥವಾ ದೃಢೀಕರಣವನ್ನು ಸಲ್ಲಿಸಿದ್ದಾರೆ ಎಂದು ಕುಮಾರ್ ಅವರ ಮನವಿಯಲ್ಲಿ ತಿಳಿಸಲಾಗಿದೆ.