ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ತಮಟಕಲ್ಲು ಗ್ರಾಮದ ಸೇತುವೆ ಸಮೀಪ ನಡೆದಿದೆ. ಕೊಲ್ಲಾಪುರದ ಡಿವೈಎಸ್‌ಪಿ ವೈಷ್ಣವಿ ಅವರಿದ್ದ ಕಾರು ಕಾರು ಓವರ್‌ಟೇಕ್ ಮಾಡುವ ಯತ್ನದಲ್ಲಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಮಹಾರಾಷ್ಟ್ರದಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೆ ಒಳಗಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದಲ್ಲಿ ಡಿವೈಎಸ್‌ಪಿ ವೈಷ್ಣವಿ ಅವರ ತಾಯಿ 65 ವರ್ಷದ ಕಮಲ ಹರಿಬಾಬು ಮತ್ತು ಚಾಲಕ ರಾಕೇಶ್ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೈಷ್ಣವಿ ಮತ್ತು ಇನ್ನೂ ಮೂವರು ಗಾಯಗೊಂಡವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲೆ ಮಾಡಲಾಗಿದ್ದು, ತಕ್ಷಣ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: FOOD |ರಜೆ ಅಂತ ಮಕ್ಕಳು ಮನೆಯಲ್ಲೇ ಇದ್ದಾರಾ? ಟೈಮ್‌ಪಾಸ್‌ಗೆ ಮಾಡಿ ರಾಗಿ ಚಕ್ಕುಲಿ
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

