ದಕ್ಷಿಣ ಒಳನಾಡಿನಲ್ಲಿ, ಗುಡ್ಡಗಾಡು ಪ್ರದೇಶಗಳು ಮತ್ತು ಕರಾವಳಿ ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಕೆಲವೆಡೆ ಗಂಟೆಗೆ 30-40 ಕಿಮೀ ವೇಗದಲ್ಲಿ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಜಿಲ್ಲೆಗಳಾದ ತುಮಕೂರು, ರಾಮನಗರ ಮತ್ತು ಚಾಮರಾಜನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮಂಡ್ಯ, ಮೈಸೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದೆ.