ಎಸ್‌ಐಟಿ ಕಚೇರಿಯಲ್ಲಿ ರಾತ್ರಿ ಕಳೆದ ಪ್ರಜ್ವಲ್ ರೇವಣ್ಣ: ಇಂದು ವೈದ್ಯಕೀಯ ತಪಾಸಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಿನ್ನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿಯಿಂದ ಬಂಧನಕ್ಕೊಳಗಾದ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಚೇರಿಯಲ್ಲಿ ರಾತ್ರಿ ಕಳೆದಿದ್ದಾರೆ.

ಪ್ರಜ್ವಲ್ ಅವರನ್ನು ಶುಕ್ರವಾರ ಬೆಳಗ್ಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಶುಕ್ರವಾರ ಬೆಳಗ್ಗೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಅತ್ಯಾಚಾರ ಘಟನೆಗಳು ನಡೆದಿವೆ ಎಂದು ಹೇಳಲಾದ ಪ್ರಜ್ವಲ್ ರೇವಣ್ಣ ಅವರ ವಸತಿ ಗೃಹ ಮತ್ತು ಹೊಳೆನರಸೀಪುರದ ಫಾರ್ಮ್‌ ಹೌಸ್‌ಗಳಿಗೆ ಸ್ಥಳ ಮಹಜರಿಗಾಗಿ ಅವರನ್ನು ಕರೆದೊಯ್ಯಬೇಕಾಗಿರುವುದರಿಂದ ಎಸ್‌ಐಟಿ ಅವರನ್ನು ಕಸ್ಟಡಿಗೆ ಕೇಳಲಿದೆ. ಬಳಿಕ ಎಸ್‌ಐಟಿ ಅಧಿಕಾರಿಗಳು ವಿವರವಾದ ಹೇಳಿಕೆಗಳನ್ನು ದಾಖಲಿಸಿಕೊಳ್ಳಬೇಕಿದೆ.

ಸುಮಾರು 34 ದಿನಗಳಿಂದ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ಗಾಗಿ ಹುಡುಕಾಟ ನಡೆಸಿದ್ದರು. ಅವರ ವಿರುದ್ಧ ಎರಡು ಅತ್ಯಾಚಾರ ಪ್ರಕರಣಗಳು ಸೇರಿದಂತೆ ಮೂರು ಎಫ್‌ಐಆರ್‌ಗಳು ದಾಖಲಾಗಿದ್ದು, ಅವರ ವಿರುದ್ಧ ಬಂಧನ ವಾರಂಟ್ ಕೂಡ ಜಾರಿ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!