ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರದ ನಂತರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಪತ್ನಿ ಸೋನಲ್ ಶಾ ಅವರೊಂದಿಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಆಂಧ್ರಪ್ರದೇಶದ ತಿರುಮಲದಲ್ಲಿರುವ ತಿರುಪತಿ ವೆಂಕಟರಮಣ ದೇವಸ್ಥಾನದಲ್ಲಿ ಅಮಿತ್ ಶಾ ವಿಶೇಷ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಭೇಟಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ಕೃಪೆಯು ಪ್ರತಿಯೊಬ್ಬರ ಜೀವನದಲ್ಲಿ ಮೇಲಿರಲಿ. ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದು ಬರೆದುಕೊಂಡಿದ್ದಾರೆ.
Fortunate to have offered prayers at Tirupati Temple in Tirumala, Andhra Pradesh.
May the grace of Sri Venkateswara Swami fill everyone’s life with good health and prosperity. pic.twitter.com/aMZhxjHk86
— Amit Shah (Modi Ka Parivar) (@AmitShah) May 31, 2024