ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ನೊಟೀಸ್ ನೀಡಿದೆ. ಜೂನ್ 1 ರಂದು ಹೊಳೆನರಸೀಪುರದ ಮನೆಯಲ್ಲಿ ತನಿಖೆ ಮತ್ತು ವಿಚಾರಣೆಗೆ ಹಾಜರಿರುವಂತೆ ತಿಳಿಸಿದೆ.
ಮೊದಲು ನೀಡಿದ್ದ ನೊಟೀಸ್ ಗೆ ಪ್ರತಿಕ್ರಿಯಿಸಿದ್ದ ತಾವು, ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ನಿವಾಸದಲ್ಲಿ ಇರುವುದಾಗಿ ತಿಳಿಸಿದ್ದೀರಿ. ಆದರೆ, ಈ ಹಿಂದೆ ನೀಡಿದ್ದ ನೊಟೀಸ್ ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ತಿಳಿಸಲಾಗಿದೆ.
ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಬರುತ್ತೇವೆ. ಆ ಸಂದರ್ಭದಲ್ಲಿ ನೀವು ಮನೆಯಲ್ಲಿ ಖುದ್ದು ಹಾಜರಿರಬೇಕು’ ಎಂದು ಎಸ್ಐಟಿ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ಸೂಚಿಸಿದ್ದಾರೆ.
ಹಾಸನ ಸಂಸದ, ಮತ್ತು ತಮ್ಮ ಮಗ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.