ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ನಡೆಯುತ್ತಿದ್ದು, ಘಟಾನುಘಟಿಗಳ ಭವಿಷ್ಯ ನಿರ್ಧಾರವಾಗಲಿದೆ.
ಪ್ರಧಾನಿ ಮೋದಿ, ಮೀಸಾ ಭಾರತಿ, ಅಭಿಷೇಕ್ ಬ್ಯಾನರ್ಜಿ, ಅನುರಾಗ್ ಠಾಕೂರ್, ನಟ ರವಿ ಕಿಶನ್, ಚರಣಜಿತ್ ಸಿಂಗ್ ಚನ್ನಿ, ಕಂಗನಾ ರಣಾವತ್ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ನಟಿ ಕಂಗನಾ ರಣಾವತ್ ಅವರನ್ನು ಬಿಜೆಪಿ ಮೊದಲ ಬಾರಿಗೆ ಕಣಕ್ಕಿಳಿಸಿದೆ. ದಿವಂಗತ ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಕಾಂಗ್ರೆಸ್ ಭದ್ರಕೋಟೆಯಾದ ಮಂಡಿ ಕ್ಷೇತ್ರದಲ್ಲಿ ಕಂಗನಾ ಸ್ಪರ್ಧಿಸುತ್ತಿದ್ದಾರೆ.