ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮಾನನಷ್ಟ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕ ಬೆನ್ನಲ್ಲೇ ರಾಹುಲ್ ಗಾಂಧಿಗೆ ರಿಲೀಫ್ ಸಿಕ್ಕಿದೆ.
ಪ್ರಕರಣದ 4ನೇ ಆರೋಪಿ ರಾಹುಲ್ ಗಾಂಧಿ (Rahul Gandhi) ಅವರು ಶನಿವಾರ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ವಾರಂಟ್ ಜಾರಿ ಮಾಡುವಂತೆ ದೂರುದಾರರ ಪರ ವಕೀಲ ಮನವಿ ಮಾಡಿದ್ದರು. ಆದರೆ,ಜೂನ್ 7 ರಂದು ಖುದ್ದು ಹಾಜರಾಗಲು 42ನೇ ಎಸಿಎಂಎಂ ಕೋರ್ಟ್ ಸೂಚನೆ ನೀಡಿದೆ.
ಸಿಆರ್‌ಪಿಸಿ 205 ಅಡಿಯಲ್ಲಿ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಲಾಗಿದ್ದು, ಜೂನ್ 7 ರಂದು ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಸೂಚನೆ ನೀಡಲಾಗಿದೆ.
ಬಿಜೆಪಿ ಮಾನನಷ್ಟ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾದ್ ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ಇಂದು ಕೋರ್ಟ್‌ಗೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ನೀಡಲಾಗಿತ್ತು.ಪ್ರಕರಣದ ಇನ್ನೊಬ್ಬ ಆರೋಪಿ ರಾಹುಲ್ ಗಾಂಧಿ (Rahul Gandhi) ಗೈರು ಹಾಜರಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಗರಂ ಆಗಿದ್ದರು.
ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ A4 ಆರೋಪಿಯಾಗಿದ್ದಾರೆ.