Sunday, January 11, 2026

ಅತ್ಯಾಚಾರ ಮಾಡಿ ವಿಡಿಯೋ ಹರಿಬಿಟ್ಟ ಕಾಮುಕರು: ಗೂಸಾ ಕೊಟ್ಟು ಪೊಲೀಸರಿಗೊಪ್ಪಿಸಿದ ಜನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಅದರ ವಿಡಿಯೋ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸ್ಥಳೀಯರು ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಜನವರಿ 9ರಂದು ಅಂಬೇಡ್ಕರ್ ಮೈದಾನದ ಬಳಿ ಮಹಿಳೆಯನ್ನು ಆಟೋದಲ್ಲಿ ಕರೆದುಕೊಂಡು ಹೋದ ಆರೋಪಿಗಳು, ಬಳಿಕ ಮದ್ಯಪಾನ ಮಾಡಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕೃತ್ಯವನ್ನು ವಿಡಿಯೋ ಮಾಡಲಾಗಿದ್ದು, ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿದೆ. ಘಟನೆ ನಡೆದ ದಿನದ ನಂತರ ಸಂತ್ರಸ್ತ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಇದನ್ನೂ ಓದಿ: FOOD | ಎಂದಾದರೂ ಜೋಳದ ಹಿಟ್ಟಿನ ಇಡ್ಲಿ ಸವಿದಿದ್ದೀರಾ? ರೆಸಿಪಿ ತುಂಬಾ ಸಿಂಪಲ್

ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಪಿಗಳಾದ ಶಿವಾನಂದ್ ಮತ್ತು ಗಣೇಶ್‌ರನ್ನು ಸ್ಥಳೀಯರು ಹಿಡಿದು ಹಲ್ಲೆ ನಡೆಸಿದ್ದಾರೆ. ಬಳಿಕ ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಇದೇ ವೇಳೆ, ಆರೋಪಿಗಳಿಗೆ ಹಲ್ಲೆ ನಡೆಸಿದ ನಾಲ್ವರು ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಅವರನ್ನು ಸಹ ಬಂಧಿಸಲಾಗಿದೆ.

ಈ ಬೆಳವಣಿಗೆಗೆ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದವರ ಮೇಲೆಯೇ ಕೇಸ್ ಹಾಕುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!