ವಿಧಾನಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್​ ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆಯೇ(ಜೂನ್ 03) ಕೊನೆ ದಿನವಾಗಿದೆ. ಹೀಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಮಣೆ ಹಾಕಿದೆ.

ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್​ ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಚಾನ್ಸ್ ಕೊಟ್ಟರೆ, ಸಿಟಿ ರವಿ ಅವರಿಗೆ ಬಂಪರ್ ಗಿಫ್ಟ್​ ಕೊಟ್ಟಿದೆ. ಆದ್ರೆ, ಸುಮಲತಾ ಅಂಬರೀಶ್​ಗೆ ನಿರಾಸೆಯಾಗಿದೆ.

ಎಂಎಲ್‌ಸಿ ಚುನಾವಣೆಗೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದಿತ್ತು. ಅದರಲ್ಲೂ ಪ್ರಮುಖವಾಗಿ ಮಂಡ್ಯ ಲೋಕಸಭಾ ತ್ಯಾಗ ಮಾಡಿದ್ದ ಸುಮಲತಾ ಅಂಬರೀಶ್​ ಅವರ ಹೆಸರು ಮುಂಚೂಣಿಯಲ್ಲಿತ್ತು. ಆದ್ರೆ, ಅಂತಿಮವಾಗಿ ಬಿಜೆಪಿ ವರಿಷ್ಠರು, ಮಾಜಿ ಸಚಿವ ಸಿ.ಟಿ ರವಿ( ಒಕ್ಕಲಿಗ ಸಮುದಾಯ), ಎನ್. ರವಿಕುಮಾರ್(ಗಂಗಾಮತಸ್ಥ) ಮತ್ತು ಎಂ.ಜಿ ಮೂಳೆ (ಮರಾಠಾ) ಅವರಿಗೆ ಮಣೆ ಹಾಕಿದೆ.

ವಿಧಾನಸಭೆ ಚುನಾವಣೆಯಲ್ಲಿ ಸೋಲುಕಂಡಿರುವ ಸಿಟಿ ರವಿ ಅವರನ್ನು ವಿಧಾನ ಪರಿಷತ್​ಗೆ ಕಳುಹಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ಈ ಬಗ್ಗೆ ಪರೋಕ್ಷವಾಗಿ ಇತ್ತೀಚೆಗೆ ಸ್ವತಃ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಹೇಳಿದ್ದರು. ಅಲ್ಲದೇ ಕೋರ್​ ಕಮಿಟಿ ಸಭೆಯಲ್ಲೂ ಸಹ ಪಟ್ಟಿಯಲ್ಲಿ ಸಿಟಿ ರವಿ ಹಾಗೂ ಲೋಕಸಭಾ ಟಿಕೆಟ್​ ವಂಚಿತ ಸದಾನಂದಗೌಡ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರ ಹೆಸರುಗಳನ್ನು ಸಹ ಹೈಕಮಾಂಡ್​ಗೆ ಕಳುಹಿಸಲಾಗಿತ್ತು. ಅಂತಿಮವಾಗಿ ಹೈಕಮಾಂಡ್​ ಸಿಟಿ ರವಿಗೆ ಅವರಿಗೆ ಅವಕಾಶ ನೀಡಿದೆ.

ಕಾಂಗ್ರೆಸ್​ನಲ್ಲಿ ಗೊಂದಲ
ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಸದಸ್ಯರ ಆಯ್ಕೆಗೊಳಿಸಲು ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ( ಜೂನ್ 3) ಕಡೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇದೆ. ಆದರೂ ಕಾಂಗ್ರೆಸ್​ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್​ ಪಾಲಿನ ಏಳು ಸ್ಥಾನಗಳಿಗೆ ಬಾರೀ ಪೈಪೋಟಿ ನಡೆದಿದೆ. ನೂರಾರೂ ಮುಖಂಡರುಗಳು ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ಶಾರ್ಟ್​ ಲಿಸ್ಟ್ ಮಾಡಿಕೊಟ್ಟುಬಂದಿದ್ದು, ಸಂಜೆ ವೇಳೆಗೆ ಹೈಕಮಾಂಡ್​ ಏಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!