ಹೊಸದಿಗಂತ ಡಿಜಿಟಲ್ ಡೆಸ್ಕ್:
ಭವಾನಿ ರೇವಣ್ಣ ಅವರನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪತ್ತೆಯಾದ ಕೂಡಲೇ ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬುದು ಗೊತ್ತಿಲ್ಲ. ಪೊಲೀಸರು ಆಕೆಯನ್ನು ಪತ್ತೆ ಹಚ್ಚಿ ಬಂಧಿಸುತ್ತಾರೆ. ಇದೆಲ್ಲ ಕಾನೂನು ಪ್ರಕಾರ ನಡೆಯುತ್ತದೆ. ಈ ವಿಚಾರ ಸರ್ಕಾರಕ್ಕೆ ಸವಾಲಿನ ಪ್ರಶ್ನೆಯೇ ಅಲ್ಲ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕುರಿತು ಪ್ರತಿಕ್ರಿಯಿಸಿದ ಅವರು, ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ನಾಳೆ (ಜೂನ್ 3) ಕೊನೆಯ ದಿನವಾಗಿದ್ದು, ಈ ನಿಟ್ಟಿನಲ್ಲಿ ಸಭೆ ಕರೆಯಲಾಗಿದೆ. ನಾಮಪತ್ರಕ್ಕೆ 10 ಜನ ಸಹಿ ಹಾಕಬೇಕು. ಈ ಕಾರಣಕ್ಕೆ ನಿಖರವಾಗಿ ಸಭೆ ಕರೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.