ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ವಿಧಾನ ಪರಿಷತ್ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರದ ಮತದಾನ ನಡೆಯಲಿದೆ.
ಕಾಂಗ್ರೆಸ್ 6 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಿದ್ದು, ಬಿಜೆಪಿ 4, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮೈತ್ರಿಯಾಗಿ ಅಖಾಡಕ್ಕಿಳಿದಿವೆ. 6 ಕ್ಷೇತ್ರಗಳಲ್ಲಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಡಾ. ಚಂದ್ರಶೇಖರ ಪಾಟೀಲ ಹಾಗೂ ಬಿಜೆಪಿಯಿಂದ ಅಮರನಾಥ ಪಾಟೀಲ್, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಆಯನೂರು ಮಂಜುನಾಥ್ ಹಾಗೂ ಭಾರತೀಯ ಜನತಾ ಪಕ್ಷದಿಂದ ಧನಂಜಯ ಸರ್ಜಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮೋಜಿಗೌಡ ಹಾಗೂ ಬಿಜೆಪಿಯಿಂದ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಡಿಟಿ ಶ್ರೀನಿವಾಸ್ ಹಾಗೂ ಬಿಜೆಪಿಯಿಂದ ವೈಎ ನಾರಾಯಣಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳ ಸ್ಪರ್ಧಿಸಿದ್ದು, ಕಾಂಗ್ರೆಸ್ನಿಂದ ಕೆಕೆ ಮಂಜುನಾಥ್ ಹಾಗೂ ಜೆಡಿಎಸ್ನಿಂದ ಎಸ್ಎಲ್ ಭೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಮರಿತಿಬ್ಬೇಗೌಡ ಹಾಗೂ JDSನಿಂದ ವಿವೇಕಾನಂದ ಸ್ಪರ್ಧಿಸಿದ್ದಾರೆ.