BIG NEWS | ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದು, ಈ ವೇಳೆ ಅವರನ್ನು ಸಿಸಿಬಿ ತನಿಖಾಧಿಕಾರಿಗಳು ಬಂಧಿಸಿ ಹೇಳಿಕೆ ಪಡೆಯುತ್ತಿದ್ದಾರೆ.

ನೊಟೀಸ್ ನೀಡಿದ್ದರೂ ಸಹ ವಿಚಾರಣೆಗೆ ನಟಿ ಬಂದಿರಲಿಲ್ಲ. ಇನ್ನು ವಿಚಾರಣೆ ವೇಳೆ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ನಟಿಯನ್ನು ಬಂಧಿಸಲಾಗಿದೆ. ಸದ್ಯ ನಟಿಗೆ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ.

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ನಟಿ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!