BIG NEWS | ತಾಜ್ ಎಕ್ಸ್‌ಪ್ರೆಸ್‌ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ತುಘಲಕಾಬಾದ್-ಓಖ್ಲಾ ನಡುವಿನ ತಾಜ್ ಎಕ್ಸ್‌ಪ್ರೆಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಒಟ್ಟು 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಅದೃಷ್ಟವಶಾತ್‌ ಯಾರಿಗೂ ಹಾನಿಯಾಗಿಲ್ಲ ಎಂದು ರೈಲ್ವೆ ಡಿಸಿಪಿ ತಿಳಿಸಿದ್ದಾರೆ.

ತುಘಲಕಾಬಾದ್-ಓಖ್ಲಾ ನಡುವೆ ತಾಜ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳಿಗೆ ಬೆಂಕಿ ಕಾಣಿಸಿಕೊಂಡ ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುತ್ತಿದ್ದಾರೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಉತ್ತರ ರೈಲ್ವೆ CPRO ಮಾಹಿತಿ ನೀಡಿದ್ದಾರೆ.

ಪ್ರಯಾಣಿಕರು ಇತರ ಬೋಗಿಗಳಿಗೆ ತೆರಳಿ ಡಿಬೋರ್ಡಿಂಗ್ ಮಾಡಿದ್ದರಿಂದ ಯಾರಿಗೂ ಗಾಯಗಳಾಗಿಲ್ಲ. ಇದಲ್ಲದೆ ರೈಲ್ವೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!