ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾನ್ಕೋವಿಕ್ ಅವರ ವಿಚ್ಛೇದನ ಸುದ್ದಿಗೆ ಕೊನೆಗೂ ಬ್ರೇಕ್ ಬಿದ್ದಿದೆ. ಇದೀಗ ಈ ಜೋಡಿಯ ಮಧ್ಯೆ ಯಾವುದೇ ಬಿರುಕು ಮೂಡಿಲ್ಲ ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ವಿಚ್ಛೇದನದ ಸುದ್ದಿಯ ನಡುವೆ, ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದರು. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್ಫ್ರೆಂಡ್ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದರು. ಈ ವೇಳೆ ನತಾಶಗೆ ಪಾಪರಾಜಿಗಳು ಪಾಂಡ್ಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ನತಾಶ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದರು.ಇದರಿಂದ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿತ್ತು. ಅಲ್ಲದೆ ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು ಎಂದು ವರದಿಯಾಗಿತ್ತು. ಈ ಎಲ್ಲ ಅನುಮಾನಗಳಿಗೆ ಇದೀಗ ತೆರೆಬಿದ್ದಂತಿದೆ.
ನತಾಶಾ ಅವರು ಪಾಂಡ್ಯ ಜತೆಗಿನ ಮದುವೆಯ ಹಲವು ಸುಂದರ ಫೋಟೊಗಳನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡು ನಮ್ಮ ಮಧ್ಯೆ ಯಾವುದೇ ಮನಸ್ತಾಪವಿಲ್ಲ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ.
ಹಾರ್ದಿಕ್ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರು ಗರ್ಭಿಣಿ ಆಗಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್ಪುರದಲ್ಲಿ ಕ್ರಿಷ್ಚಿಯನ್ ಸಂಪ್ರದಾಯದಂತೆ ಹಾರ್ದಿಕ್ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು.