133 ವರ್ಷ ಬಳಿಕ ಬೆಂಗಳೂರಲ್ಲಿ ದಾಖಲೆ ವರ್ಷಧಾರೆ: 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ.

ಇತ್ತ ಬೆಂಗಳೂರಿನಲ್ಲಿ 133 ವರ್ಷಗಳ ಬಳಿಕ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಉತ್ತಮ ಮಳೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 24 ಗಂಟೆಗಳ ಕಾಲ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು,ಬಹುತೇಕ ಕಡೆ ಭಾರೀ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!